ಅಪರಾಧ

ಮನೆಗಳಿಗೆ ನುಗ್ಗಿದ ಮುಸುಕುಧಾರಿ ಕಳ್ಳರ ತಂಡ: ಸಿಸಿಟಿವಿಯಲ್ಲಿ ದೃಶ್ಯ ಸೆರೆ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮುಸುಕುಧಾರಿ ಕಳ್ಳರ ತಂಡವೊಂದು ಮನೆಗಳಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಬುಧವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ನಡೆದಿದೆ. ಈ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

core technologies

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಿಕಟ್ಟೆ ಸಮೀಪ ಘಟನೆ ನಡೆದಿದೆ.

akshaya college

ಮೂವರು ಮುಸುಕುಧಾರಿಗಳ ತಂಡವು ಕುಕ್ಕಿಕಟ್ಟೆ ಮುಚ್ಚಲಗೋಡು ಸಮೀಪದ ಸುಬ್ರಹ್ಮಣ್ಯ ನಗರದ ವಿಠಲ ಪೂಜಾರಿ ಎಂಬವರ ಮನೆಗೆ ನುಗ್ಗಿದ್ದು, ಅಲ್ಲಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಸೊತ್ತಿಗಾಗಿ ಹುಡುಕಾಟ ನಡೆಸಿದೆ. ಆದರೆ ಯಾವುದೇ ಸೊತ್ತುಗಳು ಸಿಗದ ಹಿನ್ನೆಲೆಯಲ್ಲಿ ಕಳ್ಳರು ಅಲ್ಲಿಂದ ತೆರಳಿದ್ದಾರೆ.

ಮುಂದೆ ಅಲ್ಲೇ ಸಮೀಪದ ಇನ್ನೊಂದು ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯವರು ಎಚ್ಚರಗೊಂಡು ದೀಪ ಹಾಕಿದರು. ಈ ವೇಳೆ ಕಳ್ಳರ ತಂಡ ಅಲ್ಲಿಂದ ಪರಾರಿಯಾಗಿದೆ. ಪರಿಸರದ ಸಿಸಿಟಿವಿಯೊಂದರಲ್ಲಿ ಕಳ್ಳರು ರಸ್ತೆಯಲ್ಲಿ ಮನೆಗಳನ್ನು ಗುರುತಿಸಿಕೊಂಡು ಹೋಗುತ್ತಿರುವ ದೃಶ್ಯಗಳು ಕಂಡು ಬಂದಿವೆ.

ಮಾಹಿತಿ ತಿಳಿದು ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts