ಅಪರಾಧ

ಉಡುಪಿ: ಲಾರಿಯಲ್ಲಿ 65 ಕೆ.ಜಿ. ಗಾಂಜಾ ವಶ; ಇಬ್ಬರ ಬಂಧನ!!

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್‌ಸ್ಪೆಕ್ಟ‌ರ್ ನಿತ್ಯಾನಂದ ನಾಯಕ್ ಟ್ರಕ್ ಅಡ್ಡ ಹಾಕಿ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ.ಉಡುಪಿಯ ಕಿನ್ನಿಮೂಲ್ಕಿ ಜಂಕ್ಷನ್‌ನಲ್ಲಿ ಲಾರಿಯನ್ನು ಅಡ್ಡ ಹಾಕಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಗೋಣಿಯಲ್ಲಿ ಅನುಮಾನಾಸ್ಪದ ವಸ್ತು ಇರುವುದು ಪತ್ತೆಯಾಗಿದೆ. ತೆಗೆದು ನೋಡಿದಾಗ ಅದರಲ್ಲಿ ಅಪಾರ ಪ್ರಮಾಣದ ಗಾಂಜಾ ಸಿಕ್ಕಿದೆ.ಮಹಜರು ನಡೆಸಿ ತೂಕ ಹಾಕಿದಾಗ 65 ಕೆಜಿಗಿಂತ ಹೆಚ್ಚು ಗಾಂಜಾ ಇರುವುದು ಬೆಳಕಿಗೆ ಬಂದಿದೆ.

akshaya college

ಗಾಂಜಾ ಇಬ್ಬರು ಆರೋಪಿಗಳಾದ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗಣೇಶ್, ಆಂಧ್ರಪ್ರದೇಶದ ಅನಂತಪುರಂನ ಗೋಪಾಲ ರೆಡ್ಡಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರಪ್ರದೇಶ-ಒಡಿಶಾ ಗಡಿಭಾಗದಿಂದ ಈ ತಂದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಹೇಳಿದ್ದಾರೆ.ಗಾಂಜಾ ಮೌಲ್ಯ 35 ಲಕ್ಷ ರುಪಾಯಿ ಎಂದು ಅಂದಾಜಿಸಲಾಗಿದೆ. ಮಾರುಕಟ್ಟೆಯಲ್ಲಿ 50 ಲಕ್ಷ ವರೆಗೆ ಡಿಮ್ಯಾಂಡ್ ಇದೆ ಎನ್ನಲಾಗಿದೆ. 20 ಲಕ್ಷ ರೂಪಾಯಿ ಮೌಲ್ಯದ ಗೂಡ್ಸ್ ಲಾರಿ, ಎರಡು ಮೊಬೈಲ್ ಫೋನ್‌ ನಗದು ಸೇರಿದಂತೆ ಒಟ್ಟು 72,21,520 ರುಪಾಯಿ ಸ್ವತ್ತುಗಳನ್ನು ವಶಪಡಿಸಲಾಗಿದೆ. ಅಪಾರ ಪ್ರಮಾಣದ ಗಾಂಜಾ ಸಾಗಾಟವಾಗುತ್ತಿದ್ದದ್ದು ಎಲ್ಲಿಗೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕರಾವಳಿಯ ಪ್ರವಾಸೋದ್ಯಮ, ಶಿಕ್ಷಣ ಕ್ಷೇತ್ರವನ್ನು ಟಾರ್ಗೆಟ್ ಮಾಡುತ್ತಿರುವುದು ನಿರಂತರವಾಗಿ ನಡೆಯುತ್ತಿದೆ. ಪೊಲೀಸರು ಇದರ ಮೂಲಕ್ಕೆ ಇಳಿದು ತನಿಖೆ ನಡೆಸಬೇಕು ಎಂಬುದು ಸಾರ್ವಜನಿಕರ ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನೇಪಾಲ: ಜೈಲು ಸಿಬ್ಬಂದಿ – ಕೈದಿಗಳ ನಡುವೆ ಸಂಘರ್ಷ!! ಜೈಲಿನಿಂದ ಪರಾರಿಯಾದ ಕೈದಿಗಳ ಸಂಖ್ಯೆ ಎಷ್ಟು ಗೊತ್ತೇ?

ಕಾಲ್ಮಂಡು: ಗಲಭೆ ಪೀಡಿತ ನೇಪಾಲದ ಜೈಲೊಂದರಲ್ಲಿ ಭದ್ರತ ಸಿಬಂದಿ ಹಾಗೂ ಕೈದಿಗಳ ನಡುವೆ ಗುರುವಾರ…