ಪುತ್ತೂರು: ದರ್ಬೆ ಕಾಲೇಜೊಂದರ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದು ಕಾಲೇಜಿಗೆ ಪೊಲೀಸ್ ಆಗಮಿಸಿದ ಘಟನೆ ಸೆ.15ರಂದು ನಡೆದಿದೆ.
ಆರಂಭದಲ್ಲಿ ಮಾತಿನ ಚಕಮಕಿ ನಡೆದಿತ್ತು. ಅದು ಮುಂದುವರಿದು ಇಬ್ಬರು ವಿದ್ಯಾರ್ಥಿಗಳು ಪರಸ್ಪರ ಹಲ್ಲೆ ನಡೆಸಿದ್ದಾರೆ. ಘಟನೆ ಮಾಹಿತಿ ತಿಳಿದ ಪೊಲೀಸರು ಕ್ಯಾಂಪಸ್ ಗೆ ಆಗಮಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಯಲ್ಲದ ಮುರದ ವ್ಯಕ್ತಿಯೊಬ್ಬರು ಕ್ಯಾಂಪಸ್ ಒಳಗೆ ಬಂದು ಹಲ್ಲೆ ನಡೆಸಿದ್ದಾರೆಂದು ಓರ್ವ ವಿದ್ಯಾರ್ಥಿ ಆರೋಪಿಸಿದ್ದಾರೆ.
ಓರ್ವ ವಿದ್ಯಾರ್ಥಿ ಸರಕಾರಿ ಆಸ್ಪತ್ರೆ ಮತ್ತು ಇನ್ನೋರ್ವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.