ಅಪರಾಧ

ಸುಳ್ಯ:ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿಗೆ ನಾಲ್ಕು ತಿಂಗಳ ಶಿಕ್ಷೆ!!

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ನಾಲ್ಕು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

akshaya college

2022ರ ಏಪ್ರಿಲ್ 25ರಂದು ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ ನಡೆದ ಈ ಘಟನೆ ವೇಳೆ, ಮಾಡೂರು ಗ್ರಾಮದ ನಿವಾಸಿ ಮೊಹಮ್ಮದ್ ಸತ್ತಾರ್ ಎಂಬಾತನು ಬಸ್ಸಿನಲ್ಲಿ ಯುವತಿಯ ಪಕ್ಕದಲ್ಲಿ ಕುಳಿತು ಕಿರುಕುಳ ನೀಡಿದ್ದಾನೆ.

ಈ ಪ್ರಕರಣವನ್ನು ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಜೇಶ್ ಕೆ.ವಿ. ತನಿಖೆ ನಡೆಸಿ, ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ ಪುತ್ತೂರು ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜಿಎಮ್ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ ಅವರು, ಆರೋಪಿಯ ಮೇಲೆ ತಪ್ಪು ಸಾಬೀತಾಗಿದೆ ಎಂದು ತೀರ್ಪು ನೀಡುತ್ತಾ ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಆರೋಪಿಗೆ ಇನ್ನೂ ಒಂದು ತಿಂಗಳ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗಿದೆ.

ಸರ್ಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ಕೆ. ಅವರು ವಾದ ಮಂಡಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts