ಆ್ಯಸಿಡ್ ಸೇವಿಸಿ ಹೋಮ್ ಗಾರ್ಡ್ ವೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಪ್ರಭಾಕರ ಪೈ (60 ವರ್ಷ) ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಅವರು ಮಾನಸಿಕ ಖಿನ್ನತೆಗೆ ಒಳಗಾಗಿ ಆ್ಯಸಿಡ್ ಸೇವಿಸಿದ್ದಾರೆಂದು ತಿಳಿದು ಬಂದಿದೆ. ತಕ್ಷಣ ಅವರನ್ನ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಪೆರಾಜೆ ಅಂಜಿಕಾರ್ ಮೂಲದ ಪ್ರಭಾಕರ ಪೈ ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ ನಿರ್ವಹಿಸಿದ್ದರು. ಕಳೆದ ಒಂದು ವರ್ಷದಿಂದ ಕರ್ತವ್ಯದಿಂದ ಹೊರಗಿದ್ದರು ಎಂದು ತಿಳಿದು ಬಂದಿದೆ. ಇವರು ಮುಳುಗು ತಜ್ಞ ಕೂಡ ಆಗಿದ್ದು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.