ಕಾರ್ಕಳ: ಅಕ್ರಮವಾಗಿರುವ ಆನ್ ಲೈನ್ ಗೇಮ್ ಆ್ಯಪ್ ಗಳನ್ನು ಮೊಬೈಲ್ ಗೆ ಇನ್ಟ್ನಲ್ ಮಾಡಿಕೊಡುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಮಂಗಳೂರು ಗಂಜಿಮಠದ ನಜೀರ್ (44) ಎಂದು ಗುರುತಿಸಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಮಣ್ ಗ್ರಾಮದಲ್ಲಿ ಈತ ಆನ್‌ಲೈನ್ ಗೇಮಿಂಗ್ ಆಡುತ್ತ ಇತರರಿಗೆ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡಿಕೊಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಗ್ರಾಮಾಂತರ ಠಾಣಾ ಪಿಎಸ್‌ಐ ಆತನನ್ನು ವಶಕ್ಕೆ ಪಡೆದಿದ್ದಾರೆ.
ನಜೀರ್ ಮೊಬೈಲ್ ಫೋನ್ ಪರಿಶೀಲಿಸಿದಾಗ ವೆಬ್ ಸೈಟ್ ಲಿಂಕ್ ಮತ್ತು App ಬಳಸಿ ಆನ್ ಲೈನ್ ಬೆಟ್ಟಿಂಗ್ ಆಡುತ್ತಿರುವುದು ಕಂಡುಬಂದಿದ್ದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದೇ ವೇಳೆ ಆತನ ಬಳಿ ಇದ್ದ 30 ಸಾವಿರ ರೂ. ವಶಕ್ಕೆ ಪಡೆಯಲಾಗಿದೆ.