pashupathi
ಅಪರಾಧ

ವಿಚಾರಣೆಗೆ ಹಾಜರಾಗುವಂತೆ ತಿಮರೋಡಿ ಮನೆಗೆ ಮೂರನೇ ನೋಟಿಸ್!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಅಕ್ರಮ ಬಂದೂಕು, ತಲವಾರು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಮೂರನೇ ನೋಟಿಸ್ ನೀಡಲಾಗಿದೆ.

akshaya college

ಅಕ್ರಮವಾಗಿರಿಸಿಕೊಂಡಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಸೆ.26 ರಂದು ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಮೂರನೇ ನೋಟೀಸ್ ಜಾರಿ ಮಾಡಿದ್ದು ಸೆ.29 ಕ್ಕೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ಅನ್ನು ತಿಮರೋಡಿ ಅವರ ಮನೆಯ ಗೋಡೆಗೆ ಅಂಟಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರು ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಜಾಮೀನಿಗಾಗಿ ಮಂಗಳೂರಿನ ಸೆಷನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಸೆ27ರಂದು ನಡೆಯಲಿದೆ.

ಮಹೇಶ್ ಶೆಟ್ಟಿ ತಿಮರೋಡಿ ಪ್ರಕರಣ ದಾಖಲಾದ ಬಳಿಕ ಕಳೆದ ಹತ್ತು ದಿನಗಳಿಂದ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ಹೊರಡಿಸಿದ್ದು, ಇದು ಮಹೇಶ್ ಶೆಟ್ಟಿ ಅವರನ್ನು ಇಕ್ಕಟ್ಟಿಗೆ ಸಿಕುಕಿಸಿದೆ. ಗಡಿಪಾರು ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಗೆ ಹೋಗುವ ಅವಕಾಶವಿದ್ದು, ಈ ಬಗ್ಗೆಯೂ ಪ್ರಯತ್ನಗಳು ನಡೆಯುತ್ತಿರುವುದಾಗಿ ಮಾಹಿತಿಗಳು ಲಭಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts