pashupathi
ಅಪರಾಧ

ವಿಪಕ್ಷ ನಾಯಕ ಆ‌ರ್.ಅಶೋಕ್ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್‌ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

akshaya college

ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಪೂಜಿನಗರದಲ್ಲಿ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲಸಿದ್ದರು.

ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್‌ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಶರಣಪ್ಪ ಅವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

‘ಕಲಬುರಗಿ ಜಿಲ್ಲೆಯ ಶರಣಪ್ಪ ಅವರು ಕಳೆದ ಎರಡೂವರೆ ವರ್ಷದಿಂದ ಅಶೋಕ ಅವರ ಬೆಂಗಾವಲು ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹದ ಕಾರಣಕ್ಕೆ ಶರಣಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts