tamanvi
ಅಪರಾಧ

ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ:    51 ಮಕ್ಕಳ ರಕ್ಷಣೆ, 41 ಲಕ್ಷ ಮೌಲ್ಯದ ಗಾಂಜಾ ವಶ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಹುಬ್ಬಳ್ಳಿ: ನೈರುತ್ಯ ರೇಲ್ವೆ ವಲಯದ ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಸೆಪ್ಟೆಂಬರ್ ತಿಂಗಳು ಕೈಗೊಂಡಿದ್ದ ‘ನನ್ನೆ ಫರಿಸ್ತೆ’ ಕಾರ್ಯಾಚರಣೆಯಲ್ಲಿ ರೈಲ್ವೆ ಭದ್ರತಾ ಸಿಬ್ಬಂದಿ 12 ಬಾಲಕಿಯರು ಸೇರಿ ಒಟ್ಟು 51 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

maithri

ವಿವಿಧ ಕಾರಣಗಳಿಂದ ಮಕ್ಕಳು ಮನೆ ಬಿಟ್ಟು ಬಂದಿದ್ದು, ವಿವಿಧ ನಿಲ್ದಾಣಗಳಲ್ಲಿ ದಿಕ್ಕು ತೋಚದೆ ಅಲೆಯುತ್ತಿದ್ದರು. ಕೆಲವರು ರೈಲಿನಲ್ಲಿಯೂ ಪ್ರಯಾಣ ಮಾಡುತ್ತಿದ್ದರು. ಅವರನ್ನು ಪತ್ತೆ ಮಾಡಿ, ಎನ್‌ಜಿಒ ಹಾಗೂ ಪೊಲೀಸರ ಮುಖಾಂತರ ಕುಟುಂಬಗಳಿಗೆ ಒಪ್ಪಿಸಲಾಗಿದೆ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದವರಿಂದ ₹3.22 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಸಾಮಾನ್ಯ ಪ್ರಯಾಣಿಕರಿಗೆ ನ್ಯಾಯಯುತವಾಗಿ ಟಿಕೆಟ್‌ಗಳು ಲಭ್ಯವಾಗದಂತೆ ಬ್ಲ್ಯಾಕ್ ಮಾರ್ಕೆಟ್‌ನಲ್ಲಿ ಟಿಕೆಟ್‌ ಮಾರಾಟ ಮಾಡುವವರ ವಿರುದ್ಧ 35 ಪ್ರಕರಣಗಳನ್ನು ದಾಖಲಿಸಿಕೊಂಡು, 46 ಮಂದಿಯನ್ನು ಬಂಧಿಸಲಾಗಿದೆ. ₹1.19 ಲಕ್ಷ ಮೌಲ್ಯದ 96 ಟಿಕೆಟ್‌ಗಳನ್ನು ಹಾಗೂ ಅವಧಿ ಮುಗಿದ ₹2.02 ಲಕ್ಷ ಮೌಲ್ಯದ 140 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

14 ಮಂದಿಯನ್ನು ಬಂಧಿಸಿ ₹86 ಸಾವಿರ ಮೌಲ್ಯದ ನಿಷೇಧಿತ ವಸ್ತುಗಳನ್ನು, ₹86 ಸಾವಿರ ಮೌಲ್ಯದ 168 ಮದ್ಯದ ಬಾಟಲಿಗಳು, ₹41.26 ಲಕ್ಷ ಮೌಲ್ಯದ 53.958 ಕೆ.ಜಿ ಗಾಮಜಾ ವಶಪಡಿಸಿಕೊಳ್ಳಲಾಗಿದೆ. ಆರೈಕೆ ಮತ್ತು ರಕ್ಷಣೆಯ ಅಗತ್ಯವಿದ್ದ ಆರು ಮಂದಿ ವೃದ್ಧರನ್ನು ರಕ್ಷಿಸಿ ಅವರ ಕುಟುಂಬಗಳಿಗೆ ಹಾಗೂ ಎನ್‌ಜಿಒಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: 51 ಮಕ್ಕಳ ರಕ್ಷಣೆ, 41 ಲಕ್ಷ ಮೌಲ್ಯದ ಗಾಂಜಾ ವಶ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 117