ಸುರತ್ಕಲ್: ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಇಬ್ಬರಿಗೆ ಚೂರಿಯಿಂದು ಇರಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವನಿಗೆ ಅಲ್ಪಪ್ರಮಾಣದ ಗಾಯಗಳಾಗಿರುವ ಘಟನೆ ಗುರುವಾರ ತಡರಾತ್ರಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ನಿಝಾಮ್ (23) ಮತ್ತು ಕೃಷ್ಣಾಪುರ ಹಿಲ್ ಸೈಡ್ ನಿವಾಸಿ ಹಸನ್ ಮುರ್ಷಿದ್ (18) ಎಂದು ತಿಳಿದು ಬಂದಿದೆ.
ಘಟನೆಯಿಂದ ನಿಝಾಮ್ ರ ಹೊಟ್ಟೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಆತನಿಗೆ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣಪ್ರಮಾಣದ ಇರಿತದ ಗಾಯಗಳಾಗಿರುವ ಮುರ್ಷಿದ್ ಮುಕ್ಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

























