ಅಪರಾಧ

ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು: ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲು

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆಯಲ್ಲಿ ಶೂಟೌಟ್ ನಡೆಸಿದ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

core technologies

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2) r/w 3(5) ಭಾರತೀಯ ನ್ಯಾಯ ಸಂಹಿತೆ 2023. ಮತ್ತು ಕಲಂ 4, 5, 6, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ & ಸಂರಕ್ಷಣಾ ಕಾಯ್ದೆ 2020 ರಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದ ದಾಖಲೆಗಳ ಬಗ್ಗೆ ವಿಚಾರಿಸಲಾಗಿ, ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿರವರು ದೃಢೀಕರಿಸಿದಂತೆ, ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುವುದಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸದ್ರಿ ದಾಖಲೆಗಳು (ರಶೀದಿ ಕ್ರಮ ಸಂಖ್ಯೆ: 27653 ಹಾಗೂ 27654 ಗಳನ್ನು) ತಿದ್ದಿ ಸುಳ್ಳು ಸೃಷ್ಟನೆ ಮಾಡಿ ಪ್ರಸಾರ ಮಾಡಿರುವುದಾಗಿ ತಿಳಿದುಬಂದಿರುತ್ತದೆ. ಮುಂದುವರಿದಂತೆ ಆರ್.ಟಿ.ಓ ಅಧಿಕಾರಿ ಮತ್ತು ಪಶು ವೈದ್ಯಾಧಿಕಾರಿಯವರಿಂದ ಮಾಹಿತಿ ಪಡೆಯಲಾಗಿ, ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿರುವುದಿಲ್ಲವೆಂದು ಮಾಹಿತಿಯನ್ನು ನೀಡಿರುತ್ತಾರೆ.

akshaya college

ಈ ರೀತಿ ಸುಳ್ಳು ಸೃಷ್ಟನೆ ಮಾಡಿದ ಹಾಗೂ ನೈಜವಾಗಿರದ ದಾಖಲೆಗಳೆಂದು ತಿಳಿದಿದ್ದರು ಕೂಡಾ, ಆರೋಪಿಗಳನ್ನು ರಕ್ಷಿಸುವ ದುರುಧ್ಧೇಶದಿಂದ State office SDPI  Karnataka ಎಂಬ ಹೆಸರಿನ“X”ಖಾತೆಯ ಖಾತೆದಾರರು, Thejasnews.com ನ  ಮಾಲಕ/ಸಂಪಾದಕ ಮತ್ತು Sadath Bajathur ಎಂಬವರು ಹಾಗೂ ಇತರ ಕೆಲವು ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವ ಮೂಲಕ, ಸಾರ್ವಜನಿಕರು ಉದ್ವೇಗಗೊಂಡು ಜನರು ಗುಂಪು ಕೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶ ಸೃಷ್ಟಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 05.11.2025  ರಂದು ಅ.ಕ್ರ: 123-2025, ಕಲಂ: 233,240,338,353(1)(b),192,61(2)(b),238(c),r/w3(5))ಭಾರತೀಯ ನ್ಯಾಯ ಸಂಹಿತೆ 2023,ರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೂಡಾ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಕಠಿನ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು. ಆದ್ದರಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯುತವಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts