ಪುತ್ತೂರು: ಆರೋಪಿಯೊಬ್ಬನಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿ ನಕಲಿ ಪಹಣಿಪತ್ರ ನೀಡಿ ನ್ಯಾಯಾಲಯಕ್ಕೆ ವಂಚನೆ ಎಸಗಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.
ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ.
ಈತ ಪುತ್ತೂರು ನಿವಾಸಿಯೊಬ್ಬರ ಮಾಲಕತ್ವದಲ್ಲಿರುವ ಜಮೀನಿನ ಪಹಣಿಪತ್ರ( ಆರ್ಟಿಸಿ)ವನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471 ಐ. ಪಿ. ಸಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಪ್ರಕರಣದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪದಲ್ಲಿ ಅಬ್ದುಲ್ ಹಾಶೀಮ್ ನನ್ನು ಗುರುವಾರ ಬಂಧಿಸಿ , ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿರುತ್ತದೆ.
























