tamanvi
ಅಪರಾಧ

ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹದ ಬ್ಯಾನರಿಗೆ ಹಾನಿ!! ಪುತ್ತಿಲ ಪರಿವಾರದ ಪ್ರಮುಖರಿಂದ ಸಾಮೂಹಿಕ ಪ್ರಾರ್ಥನೆಗೆ ಚಿಂತನೆ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ವರದಿಯಾಗಿದೆ.

ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರೇ ಹಾಕಿದ್ದ ಬ್ಯಾನರ್ ಇದಾಗಿತ್ತು. ಅಕ್ಕಪಕ್ಕದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರ್ ಹಾಕಲಾಗಿತ್ತು. ಈ ಎರಡೂ ಬ್ಯಾನರ್ ಗಳನ್ನು ಹರಿದು ಹಾಕಲಾಗಿದೆ ಎಂದು ಹೇಳಲಾಗಿದೆ.

ಇದರ ಬಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119