ಅಪರಾಧ

ಅರಂತೋಡು: ಗುಂಡೇಟಿಗೆ ಕಡವೆ ಬಲಿ!

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ.

Shani-pooja

.

ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ.

ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ ಕಡವೆಯನ್ನು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆ ನಡೆಸಿದ್ದಾರೆ. ರಸ್ತೆಯ ಬದಿಯಲ್ಲಿ ಕಡವೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104