tamanvi
ಅಪರಾಧ

ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಗೆ ಹಲ್ಲೆ – ಪೀಠೋಪಕರಣಕ್ಕೆ ಹಾನಿ: ಪುತ್ತಿಲ ಭೇಟಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ಮುಖ್ಯರಸ್ತೆ ದರ್ಬೆ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವರು ಹಲ್ಲೆ ನಡೆಸಿ, ಕ್ಲಿನಿಕ್‌ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶುಕ್ರವಾರ (ನ.29) ಬೆಳಗ್ಗೆ ನಡೆದಿದೆ.

maithri

ಕ್ಲಿನಿಕ್‌ನಲ್ಲಿ ಪ್ರತಿದಿನ ಬೆಳಗ್ಗೆ ಬೇಗ ಚಿಕಿತ್ಸೆ ಪಡೆಯಲು ನೂರಾರು ಮಂದಿ ಆಗಮಿಸುತ್ತಾರೆ. ಟೋಕನ್ ವ್ಯವಸ್ಥೆಯ ಪ್ರಕಾರವೇ ವೈದ್ಯರ ಸಂದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 6.30ರ ಹೊತ್ತಿಗೆ ಬಂದ ವ್ಯಕ್ತಿಯೊಬ್ಬರು ತಮ್ಮ ಪರಿಚಯಸ್ಥರಿಗೆ ಆದ್ಯತೆ ನೀಡುವಂತೆ ಸಿಬ್ಬಂದಿಗೆ ಒತ್ತಾಯಿಸಿದ್ದರು. ಸಿಬ್ಬಂದಿ ಟೋಕನ್ ಪ್ರಕಾರವೇ ಕಳುಹಿಸಬೇಕೆಂದು ತಿಳಿಸಿದಾಗ ಮಾತಿನ ಚಕಮಕಿ ಸಂಭವಿಸಿ, ವ್ಯಕ್ತಿ ಸಿಬ್ಬಂದಿ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕ್ಲಿನಿಕ್‌ನ ಕೆಲವು ಪೀಠೋಪಕರಣಗಳು ಹಾನಿಗೀಡಾಗಿರುವುದೂ ತಿಳಿದುಬಂದಿದೆ.

ಗಾಯಗೊಂಡ ಶ್ರೀಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯಂತೆ, ಸ್ಥಳಕ್ಕೆ ಭೇಟಿ ನೀಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರಿಗೆ ಕ್ಲಿನಿಕ್‌ನ ವೈದ್ಯರು ಘಟನೆ ವಿವರಿಸಿದ್ದಾರೆ. ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117