tamanvi
ಅಪರಾಧ

ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ.

ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119