ಹೆಬ್ರಿ: ಮದ್ಯಪಾನ ಎಂದು ಭಾವಿಸಿ ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದಲ್ಲಿ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ತಮ್ಮು ಪೂಜಾರಿ (78) ಎಂದು ಗುರುತಿಸಲಾಗಿದೆ.
ಇವರು ನ. 20ರಂದು ಮನೆಯಲ್ಲಿದ್ದ ವಾಹನದ ಬ್ರೇಕ್ ಪ್ಯೂಡ್ ಆಯಿಲ್ ಅನ್ನು ಮಧ್ಯಪಾನವೆಂದು ಭಾವಿಸಿ ಸೇವಿಸಿದ್ದರು ಎನ್ನಲಾಗಿದೆ.
ಇದು ವಿಷಯುಕ್ತವಾಗಿರುವುದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿ. 2ರಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರೆಂದು ತಿಳಿದುಬಂದಿದೆ.
ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























