ಪುತ್ತೂರು: ಕಬಕ ಗ್ರಾಮದ ಮುರ ರೈಲ್ವೇ ಬ್ರಿಡ್ಜ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಬಂಧಿತ.
ರೈಲ್ವೇ ಬ್ರಿಡ್ಜ್ ಬಳಿಯಿದ್ದ ಆರೋಪಿಯನ್ನು ವಿಚಾರಿಸುವಾಗ ಆತನ ಬಳಿ 10 ಗ್ರಾಂ MDMA ಎಂಬ ನಿಷೇಧಿತ ಮಾದಕವಸ್ತು ಪತ್ತೆಯಾಗಿರುತ್ತದೆ.
ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಪಿ.ಎಸ್.ಐ. ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರ ತಂಡ, ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ: 119/2025, ಕಲಂ: 8(C),22(b) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುತ್ತದೆ.
ಆರೋಪಿಯ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.



























