ಪುತ್ತೂರು: ಕಳೆದ ಬಾರಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಸುಳ್ಳು ಮಾಹಿತಿ ಇರುವ ನಕಲಿ ಪೋಸ್ಟರ್ ಗಳನ್ನು ಹಂಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಆಶಾ ತಿಮ್ಮಪ್ಪ ಗೌಡ ಅವರು ಮೋದಿ ಅವರನ್ನು ಭೇಟಿಯಾಗಲು ಸಾಧ್ಯವಾಗದಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ ಎಂಬರ್ಥದ ನಕಲಿ ಪೋಸ್ಟರ್’ಗಳು ವ್ಯಾಪಕವಾಗಿ ಹರಿದಾಡಿದ್ದವು.
“ದೇಶದ ಪ್ರಧಾನಿ ಮೋದಿಜಿಯವರು ಉಡುಪಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ನನಗೂ ಅವರನ್ನು ನೋಡುವ ಭಾಗ್ಯ ಸಿಗಬಹುದು ಅಂದುಕೊಂಡಿದ್ದೆ. ಆದರೆ ಈಗ ನಾನು ಪಕ್ಷಕ್ಕೆ ಬೇಡವಾಗಿದ್ದೇನೆ” ಎಂಬ ಹೇಳಿಕೆಯನ್ನು ಅವರಿಗೆ ಆರೋಪಿಸಿ ಕೆಲವರು ಪೋಸ್ಟರ್’ಗಳನ್ನು ಸೃಷ್ಟಿಸಿದ್ದು, ಅಪಪ್ರಚಾರ ಮಾಡಿದ ಕಿಡಿಗೇಡಿಗಳ ವಿರುದ್ಧ ಆಶಾ ತಿಮ್ಮಪ್ಪ ಗೌಡ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



























