Gl
ಅಪರಾಧ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ.

core technologies

ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು.

ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರೆಗೆ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts