Gl
ಅಪರಾಧ

ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ ಪೊಲೀಸರಿಗೆ ದೂರು

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುರುಷರಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಹರಿದು ಹಾಕಿದ ಘಟನೆ ನಡೆದಿದೆ.

core technologies

‌ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗ್ರಾಮದ ನಡುವಾಲ್ ಎಂಬಲ್ಲಿಗೆ ರಸ್ತೆ ಸಂಪರ್ಕ ಇರಲಿಲ್ಲ. ಇಲ್ಲಿಗೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ಅವರು ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದರು. ರಸ್ತೆ ಕಾಮಗಾರಿಗೆ 5 ಲಕ್ಷ ರೂ. ಅನುದಾನವನ್ನೂ ಒದಗಿಸಿದ್ದರು. ಈ ಸಂಬಂಧ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ್ದರು. ‌ಈ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ್ದು ಆರೋಪಿಗಳನ್ನು ಬಂಧಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೇವರು ಹಾಗೂ ದೈವಕ್ಕೂ ಹರಕೆ ಸಲ್ಲಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts