Gl
ಅಪರಾಧ

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬೈರತಿ ಬಸವರಾಜ್‌ಗೆ ಬಂಧನ ಭೀತಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ ಅವರಿಗೆ ಬಂಧನ ಭೀತಿ ಎದುರಾಗಿದೆ.

core technologies

ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ನ್ಯಾಯಪೀಠ ನೀರಿಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.

ಕೋಕಾ ಕಾಯ್ದೆ ಆದೇಶ ವಜಾ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಹೈಕೋರ್ಟ್‌ ರಿಲೀಫ್ ಜೊತೆಗೆ ಮತ್ತೊಂದು ಟೆನ್ಶನ್ ನೀಡಿದೆ. ಸಿಐಡಿ ಮುಖ್ಯಸ್ಥರು ತಮ್ಮ ವಿರುದ್ಧ ಹೊರಡಿಸಿದ್ದ ಕೊಕಾ ಕಾಯ್ದೆ ಆದೇಶ ಪ್ರಶ್ನಿಸಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಕೋಕಾ ಕಾಯ್ದೆ ಆದೇಶ ವಜಾಗೊಳಿಸಿದೆ. ಈ ಮೂಲಕ ಬೈರತಿ ಬಸವರಾಜ್‌ಗೆ ರಿಲೀಫ್ ನೀಡಿದೆ.

ಹತ್ಯೆ ಪ್ರಕರಣ

2025 ಜುಲೈ 15ರ ರಾತ್ರಿ ಬಿಕ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. ಈತನ ನಿಜವಾದ ಹೆಸರು ಶಿವಪ್ರಕಾಶ್ ಅಥವಾ ಶಿವಕುಮಾರ್, ವಯಸ್ಸು ಸುಮಾರು 40-44. ಬೆಂಗಳೂರಿನ ರೌಡಿಶೀಟರ್ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ. ಆತನ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು.

2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮೀನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ, ಬರ್ಬರವಾಗಿ ಹತ್ಯೆ ಮಾಡಿತ್ತು. ಹತ್ಯೆಯು ಆತನ ತಾಯಿ ಎದುರು ನಡೆದಿದ್ದು, ದಾಳಿಯ ವಿಡಿಯೋಗಳು ಸಹ ಬಯಲಾಗಿವೆ. ಬಿಕ್ಲು ಶಿವನ ತಾಯಿ ವಿಜಯಲಕ್ಷ್ಮಿ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಯಿತು.

ಇದರಲ್ಲಿ ಕೆಆರ್‌ ಪುರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು A5 ಆರೋಪಿಯಾಗಿ ಹೆಸರಿಸಲಾಗಿದೆ ಬಿಕ್ಲು ಶಿವ ಹತ್ಯೆಗೆ ಪ್ರೇರಣೆ ನೀಡಿದ ಆರೋಪ ಬೈರತಿ ಬಸವರಾಜ್ ಮೇಲಿದೆ. ಈ ಕೇಸ್‌ನಲ್ಲಿ ಬೈರತಿ ಬಸವರಾಜ್ ಆಪ್ತ ಜಗದೀಶ್ ಅಲಿಯಾಸ್ ಜಗ್ಗ A1 ಆಗಿದ್ದರೆ ಕಿರಣ್ ಸೇರಿದಂತೆ ಹಲವರ ಹೆಸರು ಇದೆ.

ಆರಂಭದಲ್ಲಿ ಭಾರತಿನಗರ ಠಾಣೆ ಪೊಲೀಸರು ತನಿಖೆ ನಡೆಸಿದರು. ನಂತರ ಜುಲೈ 24ರಂದು ಸಿಐಡಿಗೆ ವರ್ಗಾವಣೆಯಾಯಿತು. ಜುಲೈ – ಆಗಸ್ಟ್‌ವರೆಗೆ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಕಿರಣ್, ವಿಮಲ್, ಪ್ರದೀಪ್, ಮದನ್, ಸ್ಯಾಮ್ಯುವೆಲ್, ಅರುಣ್, ನವೀನ್, ನರಸಿಂಹ ಮುಂತಾದವರು ಅರೆಸ್ಟ್ ಆಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts