ಗಾಜಿಯಾಬಾದ್: ಯುವಕನೊಬ್ಬ ಮಣಿಕಟ್ಟು ಸೀಳಿಕೊಂಡು ಅಪಾರ್ಟ್ಮೆಂಟ್’ನ 11ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
11ನೇ ಮಹಡಿಯಲ್ಲಿರುವ ತನ್ನ ಮನೆಯ ಬಾಲ್ಕನಿಯಿಂದ ಹಾರಿ 28 ವರ್ಷದ ಯಜ್ಞ ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಇಂದಿರಾಪುರಂನ ಸೊಸೈಟಿಯೊಂದರ ನಿವಾಸಿಯಾಗಿರುವ ಯಜ್ಞ ಪಾಂಡೆ ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.
ಜಾಹೀರಾತು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪಾಂಡೆ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ. ಇಲ್ಲಿಯವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅವರು ತಮ್ಮ ತಾಯಿ, ತಂದೆ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಮಾಧ್ಯಮ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.






















