ಅಪರಾಧ

ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಜೈಲಿನಲ್ಲಿ ಆತ್ಮಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಸಂಜೆ ನಡೆದಿದೆ.

Shani-pooja

ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ.

ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ ಪೂಜಾರ್ ಅವರು ಜೈಲಿನ ಆವರಣದಲ್ಲಿರುವ ನಿರ್ಮಾಣ ಕಟ್ಟಡದ ಸ್ಥಳದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಜೈಲಿನಲ್ಲಿ ಕೆಲಸ ಮುಗಿಸಿದ ನಂತರ ಈಶ್ವರಪ್ಪ ಪೂಜಾರ್ ಸೆಲ್​​ಗೆ ಬಂದಿಲ್ಲ. ನಂತರ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಿರ್ಮಾಣ ಕಟ್ಟಡದ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಆಸ್ಪತ್ರೆ ಸಾಗಿಸಲಾಗಿದ್ದು, , ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಯಾವ ಕಾರಣಕ್ಕೆ ಈ ನಿರ್ಧಾರ ಯಾವ ಕಾರಣಕ್ಕೆ ತೆಗೆದುಕೊಂಡರು ಎಂದು ತಿಳಿದು ಬಂದಿಲ್ಲ.

ಕೆಲಸ ಮುಗಿಸಿದ ಕೈದಿಗಳನ್ನು ಸೆಲ್ ಗೆ ಕರೆದುಕೊಂಡು ಬರುವ ಜವಾಬ್ದಾರಿಯನ್ನು ಜೈಲಿನ ಸಿಬ್ಬಂದಿಗಳಿಗೆ ನೀಡಲಾಗುತ್ತದೆ. ಈ ಜವಾಬ್ದಾರಿಯನ್ನು ನಿಭಾಯಿಸಲು ಸಿಬ್ಬಂದಿಗಳು ವಿಫಲವಾಗಿದ್ದಾರೆ ಎಂದು ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104