ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆಯ ವೀಡಿಯೋ ಇದೀಗ ವೈರಲ್ ಆಗುತ್ತಿದೆ.
ಮಹಿಳೆಯೋರ್ವರ ಜೊತೆ ಡಿಜಿಪಿ ಅಸಭ್ಯವಾಗಿ ವರ್ತಿಸುವ ವೀಡಿಯೋ ಇದಾಗಿದೆ. ಪೊಲೀಸ್ ಸಮವಸ್ತ್ರದಲ್ಲೇ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದು, ಇಲಾಖೆಗೆ ಮಾಡಿದ ಅವಮಾನ ಇದೆಂದು ಟೀಕಿಸಲಾಗುತ್ತಿದೆ.
ಸುಮಾರು 1 ವರ್ಷಗಳ ಹಿಂದೆ ಸೆರೆ ಹಿಡಿದ ದೃಶ್ಯಗಳು ಇದು ಎಂದು ಹೇಳಲಾಗುತ್ತಿದೆ. ಸದ್ಯ ಡಿಸಿಆರ್ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ.
ಕಚೇರಿಯಲ್ಲಿ ಕುಳಿತು ಪೊಲೀಸ್ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್ ಆದ ವಿಡಿಯೋದಲ್ಲಿವೆ. ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು IPS ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್ ಚಿನ್ನ ಕಳ್ಳಸಾಗಾಣಿಕೆ ಕೇಸ್ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.
ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.























