ಅಪರಾಧ

ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು: ಭೇಟಿಗೆ ನಿರಾಕರಿಸಿದ ಗೃಹ ಸಚಿವ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರ ರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿತ್ತು.

ವಿಡಿಯೊ ಬಗ್ಗೆ ಸ್ಪಷ್ಟನೆ ನೀಡಲು ಗೃಹಸಚಿವ ಡಾ. ಜಿ.ಪರಮೇಶ್ವರ್ ಅವರ ನಿವಾಸಕ್ಕೆ ರಾಮಚಂದ್ರ ರಾವ್ ತೆರಳಿದಾಗ ಅವರನ್ನು ಭೇಟಿಯಾಗಲು ಸಚಿವರು ನಿರಾಕರಿಸಿದ್ದರು.

ರಾಸಲೀಲೆ ಪ್ರಕರಣದ ಆರೋಪವನ್ನು ಡಿಜಿಪಿ ರಾಮಚಂದ್ರರಾವ್ ಅಲ್ಲಗಳೆದಿದ್ದು, ಈ ವಿಡಿಯೋ ನೋಡಿ ನನಗೆ ಶಾಕ್ ಆಗಿದೆ. ಇದರಲ್ಲಿರುವ ಮಹಿಳೆ ಯಾರೆಂಬುದು ನನಗೆ ಗೊತ್ತಿಲ್ಲ. ಇದು ತಿರುಚಿದ ಎಐ ವಿಡಿಯೋ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ರಾಮಚಂದ್ರ ರಾವ್ ಹೇಳಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts