ಪುತ್ತೂರು: ನ್ಯಾಯಾಧೀಶರ ಮುಂಭಾಗದಲ್ಲೇ ವಿಷ ಸೇವಿಸಿ, ಆತ್ಮಹತ್ಯೆ ಯತ್ನಿಸಿದ ಆಘಾತಕಾರಿ ಘಟನೆ ಗುರುವಾರ ಪುತ್ತೂರು ನ್ಯಾಯಾಲಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾವು ನಿವಾಸಿ ರವಿ (32 ವ.) ಆತ್ಮಹತ್ಯೆಗೆ ಯತ್ನಿಸಿದವರು ಎನ್ನಲಾಗಿದೆ.
ಮಧ್ಯಾಹ್ನದ ಹೊತ್ತು ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ ಅಲ್ಲಿಗೆ ಆಗಮಿಸಿದ ರವಿ ಅವರು ವಿಷ ಸೇವಿಸಿದ್ದಾರೆ. ತಕ್ಷಣವೇ ಸಿಬ್ಬಂದಿ ಹಾಗೂ ಸಾರ್ವಜನಿಕರು ರಕ್ಷಿಸಲು ಮುಂದಾಗಿದ್ದು, ಆಸ್ಪತ್ರೆಗೆ ಸಾಗಿಸಿದ್ದಾರೆ.
ಪುತ್ತೂರಿನಲ್ಲಿ ಚಿಕಿತ್ಸೆ ನೀಡಿದ್ದು, ರವಿ ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
























