ಅಪರಾಧ

ಉಪ್ಪಿನಂಗಡಿ: ಸುಪ್ರೀತಾ ನಾಪತ್ತೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ನಿವಾಸಿ ಸುಪ್ರೀತಾ (20) ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.

chennai-shopping
maithri

ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮಲಗಿದ್ದವಳು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್ ಫೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿವರೆಗೆ ಕಲಿತಿರುವ ಈಕೆ 4 ಅಡಿ 6 ಇಂಚು ಎತ್ತರವಿದ್ದು, ಸಪೂರ ಶರೀರ, ಉರುಟು ಮುಖ ವನ್ನು ಹೊಂದಿರುತ್ತಾಳೆ. ಕನ್ನಡ ತುಳು ಭಾಷೆಯನ್ನು ಮಾತನಾಡುತ್ತಾಳೆ. ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಠಾಣಾಧಿಕಾರಿ ಸುತೇಶ್ ಎಸ್. ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 105