ಅಪರಾಧಶಿಕ್ಷಣ

ಟಿಪ್ಪರ್‌ನಲ್ಲಿ ವಿದ್ಯಾರ್ಥಿಗಳ ಪ್ರವಾಸ: ಮುಖ್ಯಶಿಕ್ಷಕ ಕಿರಣ್ ಅಮಾನತು!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಸರಕು ಸಾಗಣೆ ಮಾಡುವ ಪಿಕಪ್ ಹಾಗೂ ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ.

chennai-shopping
maithri

ಜೊತೆಗೆ, ಸಂಬಂಧಿತ ಎರಡು ವಾಹನಗಳು ಹಾಗೂ ಚಾಲಕರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆಬ್ರವರಿ 9ರಂದು ಬಳೆಂಜ ಗ್ರಾಮದ ಶಾಲೆಯ ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಅನಿಲ್ ಫಾರ್ಮ್‌ಗೆ ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಕರೆದೊಯ್ದು ಮರಳಿ ತರಲಾಗಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬಳಿಕ ಫೆಬ್ರವರಿ 12ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯ ಆಧಾರದಲ್ಲಿ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಬಳೆಂಜ ನಿವಾಸಿ ಧರಣೇಂದ್ರ ನೀಡಿದ ದೂರಿನ ಮೇರೆಗೆ ಪಿಕಪ್ ವಾಹನ ಚಾಲಕ ನವೀನ್ ಹಾಗೂ ಟಿಪ್ಪರ್ ಚಾಲಕ ಪ್ರವೀಣ ವಿರುದ್ಧ ವೇಣೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಯ ಕುರಿತಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 125