ಅಪರಾಧ

ಐದು ವರ್ಷಗಳ ಬಳಿಕ ದರೋಡೆ ಆರೋಪಿ ಅರೆಸ್ಟ್: ಧರ್ಮಸ್ಥಳ ಪೊಲೀಸರ ಯಶಸ್ವಿ ಕಾರ್ಯಾಚರಣೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಇಲ್ಲಿನ ರೇಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

chennai-shopping
maithri

ಬಂಧಿತನನ್ನು ನಂಜುಂಡ ಮಾಗಡಿ (39) ಎಂದು ಗುರುತಿಸಲಾಗಿದೆ.

2017ರಲ್ಲಿ ರೇಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017 ಅಡಿಯಲ್ಲಿ ಐಪಿಸಿ ಸೆಕ್ಷನ್ 395, 397 ಹಾಗೂ 34 ಪ್ರಕಾರ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದ ಬಳಿಕ ಆರೋಪಿ ನ್ಯಾಯಾಲಯದ ಸಮನ್ಸ್‌ಗಳಿಗೆ ಸ್ಪಂದಿಸದೆ ಸುಮಾರು ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದನು ಎಂದು ತಿಳಿದುಬಂದಿದೆ.

ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಪ್ರದೇಶದಿಂದ ಬಂಧಿಸಿದ್ದಾರೆ. ಫೆಬ್ರವರಿ 13ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣ ಸಂಬಂಧ ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡು ತನಿಖೆ ಚುರುಕುಗೊಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105