ಅಪರಾಧ

21.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ – 15 ಮಂದಿ ಬಂಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 21.5 ಕೋಟಿ ರೂ. ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 15 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 3 ವಿದೇಶಿ ಪ್ರಜೆಗಳೂ ಸೇರಿದ್ದಾರೆ.

chennai-shopping
maithri

ಪೊಲೀಸರು ನೀಡಿದ ಮಾಹಿತಿಯಂತೆ, ಬಂಧಿತರಿಂದ 9.4 ಕೆಜಿ ಹ್ಯಾಶೀಶ್, 5.6 ಕೆಜಿ ಎಂಡಿಎಂಡಿಎ, 34 ಕೆಜಿ ಗಾಂಜಾ, 131 ಗ್ರಾಂ ಕೊಕೇನ್, 462 ಗ್ರಾಂ ಹೈಡ್ರೋ ಆಯಿಲ್, 56 ಎಲ್‌ಎಚ್‌ಎಸ್ ಪಿಲ್ಸ್ ಸ್ಟ್ರಿಪ್ಸ್, 1 ಕಾರು, 1 ಬೈಕ್, 4 ಮೊಬೈಲ್‌ಗಳು ಹಾಗೂ 24 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ಪೈಕಿ ನೈಜೀರಿಯಾ, ಉಗಾಂಡಾ, ದಕ್ಷಿಣ ಆಫ್ರಿಕಾ ದೇಶದ ಮೂವರು ಸೇರಿದಂತೆ 12 ಮಂದಿ ಭಾರತೀಯರು ಸೇರಿದ್ದಾರೆ.

ಇನ್ನೊಂದು ಕಾರ್ಯಾಚರಣೆಯಲ್ಲಿ ಸ್ನೇಹಿತರ ಬಳಗವೊಂದರಿಂದ 29 ಎಲ್‌ಎಸ್‌ಡಿ ಸ್ಟ್ರಿಪ್‌ಗಳು, 546 ಗ್ರಾಂ ಎಂಡಿಎಂಡಿಎ, 152 ಗ್ರಾಂ ಹೈಡ್ರೋ ಗಾಂಜಾ ಹಾಗೂ 131 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಈ ಡ್ರಗ್ಸ್‌ಗಳ ಒಟ್ಟು ಮೌಲ್ಯ ಸುಮಾರು 1.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಬಂಧಿತರು ನಗರದ ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ಪಬ್‌ಗಳು, ಹೋಟೆಲ್‌ಗಳು ಹಾಗೂ ಪಾರ್ಟಿ ಸ್ಥಳಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿದೇಶದಿಂದ ಚಾಕೊಲೇಟ್ ಮತ್ತು ವೇಷಭೂಷಣ ಕೂರಿಯರ್ ಮೂಲಕ ಡ್ರಗ್ಸ್ ತರಿಸಿ ನಗರದಲ್ಲಿ ಪೂರೈಕೆ ಮಾಡುತ್ತಿದ್ದರೆಂಬ ಮಾಹಿತಿ ಬೆಳಕಿಗೆ ಬಂದಿದೆ.

ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬಯಲಿಗೆಳೆಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105