ಅಪರಾಧ

ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ- ವ್ಯಕ್ತಿ ಪೊಲೀಸ್‌ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಬಜತ್ತೂರು ಗ್ರಾಮದ ಕಾಂಚನ ಮುಕ್ವೆಯಲ್ಲಿ ವ್ಯಕ್ತಿಯೊಬ್ಬ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಸಾರ್ವಜನಿಕರಿಂದ ಬಂದ ಮಾಹಿತಿಯ ಆಧಾರದ ಮೇಲೆ, ಉಪ್ಪಿನಂಗಡಿ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದವನನ್ನು ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್‌ ಮೋಹಾದ್‌ ಎಸ್‌(33) ಎಂದು ಗುರುತಿಸಲಾಗಿದೆ.

gl

ಮನೆಗೆ ಹೋಗುವಾಗ ಸಿಗರೇಟ್ ಸೇದುತ್ತಿದ್ದೆ ಎಂದು ಆತ ಹೇಳಿಕೊಂಡಿದ್ದು ನಂತರ, ಆ ವ್ಯಕ್ತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಅವನು ಮಾದಕ ದ್ರವ್ಯಗಳನ್ನು ಸೇವಿಸಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 120