ಅಪರಾಧ

ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಇಲ್ಲಿನ ಕರಂಬಾರು ಗ್ರಾಮದ ಬೊಟ್ಟೆಲ್ ಮಾರಿನಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ವೇಣೂರು ಪೋಲಿಸ್ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ವೇಣೂರು ಪೊಲೀಸ್ ಸಿಬಂದಿ ಬೀರೇಶ್ ಅವರು ಗಸ್ತು ತಿರುಗುತ್ತಿದ್ದ ವೇಳೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕರಂಬಾರಿನ ಬೊಟ್ಟೆಲ್ ಮಾರಿನ ನದಿ ತೀರಕ್ಕೆ ತೆರಳಿದರು. ಈ ವೇಳೆ ಆರೋಪಿಗಳಾದ ವಸಂತ ಹಾಗೂ ರಮೇಶ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ.ಪೊಲೀಸರನ್ನು ಗಮನಿಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪಿಕಪ್ ವಾಹನದಲ್ಲಿ ಸುಮಾರು 1 ಯುನಿಟ್ ಪ್ರಮಾಣದ ಮರಳು ತುಂಬಿರುವುದು ಪತ್ತೆಯಾಗಿದ್ದು, ಅದರ ಮೌಲ್ಯ ಸುಮಾರು 5 ಸಾವಿರ ರೂ. ಎಂದು ಅಂದಾಜಿಸಲಾಗಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 100