tamanvi
ಅಪರಾಧ

ಲಾರಿಯಲ್ಲಿ ಅಕ್ರಮ ಮರ ಸಾಗಾಟ ಪತ್ತೆ: 8 ಲಕ್ಷ ರೂ. ಮೌಲ್ಯದ ದಿಮ್ಮಿ ವಶ, ಪ್ರಕರಣ ದಾಖಲು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬೆಳ್ಳಾರೆ–ಸೋಣಂಗೇರಿ ರಸ್ತೆಯ ಬಂಡಿ ಮಜಲು ಎಂಬಲ್ಲಿ ಲಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ
ಖಚಿತ ಮಾಹಿತಿಯ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಅಕ್ರಮ ಸಾಗಾಟಕ್ಕೆ ಬಳಸಲಾಗಿದ್ದ ಲಾರಿ ಮತ್ತು ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.ಈ ಸಂಬಂಧ ಮದನ್ ಎಂ. ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 118