ಅಪರಾಧ

ಬಂಟ್ವಾಳದಲ್ಲಿ ಗಾಂಜಾ ಮಾರಾಟ ಯತ್ನ: 180 ಗ್ರಾಂ ಗಾಂಜಾ ಸಹಿತ ವ್ಯಕ್ತಿ ಬಂಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, ಆತನಿಂದ 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.

chennai-shopping
maithri

ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಪ್ರದೇಶದ ರಸ್ತೆ ಬದಿಯ ನಿರ್ಜನ ಸ್ಥಳದಲ್ಲಿ ವ್ಯಕ್ತಿಯೊಬ್ಬನು ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟುಕೊಂಡಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪ ನಿರೀಕ್ಷಕ (ಕಾ&ಸು) ಮಂಜುನಾಥ ಟಿ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.ಈ ವೇಳೆ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ ಅಲಿಯಾಸ್ ಪ್ರಸಾದ್ (30) ಎಂದು ಗುರುತಿಸಲಾಗಿದೆ. ಗಿರಾಕಿಗಳಿಗೆ ಮಾರಾಟ ಮಾಡಲು ಗಾಂಜಾವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ತನಿಖೆ ವೇಳೆ ಆರೋಪಿತನ ಬಳಿಯಿಂದ 180 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಈ ಗಾಂಜಾವನ್ನು ಬಂಟ್ವಾಳದ ಪಲ್ಲಮಜಲು ನಿವಾಸಿ ಅಬ್ದುಲ್ ರಜಾಕ್ ಮಾರಾಟ ಮಾಡಲು ನೀಡಿದ್ದಾನೆ ಎಂದು ಆತ ತಿಳಿಸಿದ್ದಾನೆ.ಬಂಧಿತನನ್ನು ಗಾಂಜಾ ಹಾಗೂ ಆತನ ಬಳಿಯಿದ್ದ ದ್ವಿಚಕ್ರ ವಾಹನ ಸಮೇತ ವಶಪಡಿಸಿಕೊಂಡು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ 1985ರ 8(C) r/w 20(b)(ii)(A) ಕಲಂಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 105