tamanvi
ಅಪರಾಧ

ಸುಬ್ರಹ್ಮಣ್ಯದಲ್ಲಿ ಕಾಟಿ ಬೇಟೆ: ಅರಣ್ಯ ಅಧಿಕಾರಿಗಳ ವಿರುದ್ಧ ತನಿಖೆಗೆ ಸೂಚನೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ: ಕಾಟಿ ಬೇಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ವನ್ಯಜೀವಿ ಪಾಲಕರು (PCCF-Wildlife) ತನಿಖೆಗೆ ಸೂಚನೆ ನೀಡಿದ್ದಾರೆ.

ಸುಬ್ರಹ್ಮಣ್ಯ ಸಮೀಪದ ಐತ್ತೂರು ಗ್ರಾಮದಲ್ಲಿ ಕಾಡೆಮ್ಮೆ ಬೇಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಆದೇಶ ಹೊರಡಿಸಲಾಗಿದೆ.

ಕಡಬ ನಿವಾಸಿ ತಿಮ್ಮಪ್ಪ ವಿ.ಕೆ. ಅವರು ಫೆಬ್ರವರಿ 6 ಹಾಗೂ 7ರಂದು ಇ-ಮೇಲ್ ಮುಖಾಂತರ ಸಲ್ಲಿಸಿದ ದೂರಿನಲ್ಲಿ, ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ನಿಯಮಗಳನ್ನು ಸಮರ್ಪಕವಾಗಿ ಪಾಲಿಸದೆ ತನಿಖೆ ನಡೆಸಲಾಗಿದೆ ಎಂದು ಉಲ್ಲೇಖಿಸಿದ್ದರು.

ಈ ದೂರನ್ನು ಪರಿಗಣಿಸಿದ ಬೆಂಗಳೂರಿನ ಅರಣ್ಯ ಭವನದಲ್ಲಿರುವ ಮುಖ್ಯ ವನ್ಯಜೀವಿ ಪಾಲಕರು, ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ರವಾನಿಸಿ ಪ್ರಕರಣದ ಸಮಗ್ರ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ.

ತನಿಖೆ ವೇಳೆ ಸ್ಥಳೀಯ ಅಧಿಕಾರಿಗಳಿಂದ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಜೊತೆಗೆ, ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡುವುದರೊಂದಿಗೆ ಸಂಪೂರ್ಣ ವರದಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 118