tamanvi
ಅಪರಾಧ

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಬಳಿಯ ಮೂರುಕಜೆ ಪ್ರದೇಶದಲ್ಲಿರುವ ಗುರುಕುಲದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಸಮೀಪದ ಕೆರೆಯಲ್ಲಿ ಪತ್ತೆಯಾದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಮೃತಳನ್ನು ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂದು ಗುರುತಿಸಲಾಗಿದೆ.

ಆಕೆ ನಿನ್ನೆದಿಂದ ನಾಪತ್ತೆಯಾಗಿದ್ದು, ಗುರುಕುಲದವರು ಹಾಗೂ ಸ್ಥಳೀಯರು ತೀವ್ರ ಹುಡುಕಾಟ ನಡೆಸಿದ್ದರು. ಬಳಿಕ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಯಿತು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕೆರೆಯಲ್ಲಿ ಪತ್ತೆಯಾದ ಮೃತದೇಹವನ್ನು ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಅವರ ನೇತೃತ್ವದಲ್ಲಿ ಮೇಲಕ್ಕೆತ್ತಲಾಯಿತು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 118