ಅಪರಾಧ

ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣ; ಕಾರ್ಕಳದಲ್ಲಿ ಆರೋಪಿ ಬಂಧನ

GL

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ವಿದೇಶಿಯರ ಕಾಯ್ದೆ ಉಲ್ಲಂಘನೆ ಪ್ರಕರಣದಲ್ಲಿ ಹಲವು ವರ್ಷಗಳಿಂದ ಪೊಲೀಸರ ಕಣ್ತಪಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರ್ಕಳದಲ್ಲಿ ಬಂಧಿಸಿದ್ದಾರೆ.ಬಂಧಿತನನ್ನು ಉಡುಪಿ ನಿವಾಸಿ ತಾಜ್ ಮುಹಮ್ಮದ್ ಯೂಸುಫ್( 59)ಎಂದು ಗುರುತಿಸಲಾಗಿದೆ.

chennai-shopping
maithri

2014ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯೂಸುಫ್  ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದನು. ಈತನ ವಿರುದ್ಧ ವಿದೇಶಿಯರ ಕಾಯ್ದೆಯ ವಿವಿಧ ಕಲಂಗಳು ಹಾಗೂ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ಪೋಲಿಸರ ಕಾರ್ಯಾಚರಣೆ

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತಂಡವು ಖಚಿತ ಮಾಹಿತಿ ಆಧಾರವಾಗಿ ಕಾರ್ಕಳ ಭಾಗದಲ್ಲಿ ಶೋಧ ಕಾರ್ಯಾಚರಣೆ ನಡೆಸಿತು. ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಕಾನ್‌ಸ್ಟೇಬಲ್‌ಗಳನ್ನೊಳಗೊಂಡ ತಂಡ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿತು.ಬಂಧಿತನನ್ನು ಫೆಬ್ರವರಿ 24ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 106