ಅಪರಾಧ

ಶಿವಮೊಗ್ಗ: ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ; ಮೃತ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ರೂ. ಘೋಷಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್ ಮೇಲೆ ಆತನ ಸಹಪಾಠಿಗಳು ಹಲ್ಲೆ ನಡೆಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆಯನ್ನು ಸಿಎಂ ಸಿದ್ಧರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

chennai-shopping
maithri

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೊಲೆಯಲ್ಲಿ ಭಾಗಿಯಾದವರು ಅಪ್ರಾಪ್ತರು ಎಂದು ಕೇಳಿ ಗಾಬರಿಯಾಯಿತು. ಭವಿಷ್ಯ ರೂಪಿಸಿಕೊಳ್ಳಬೇಕಾದ ಮಕ್ಕಳು ಇಂತಹ ದುಶ್ಚಟಗಳಿಗೆ ಬಲಿಯಾಗಿ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ. ಇಂತಹ ಕೃತ್ಯ ಎಸಗಿದವರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಜೊತೆಗೆ ಪೋಷಕರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು. ಶಾಲೆಯ ಸುತ್ತಮುತ್ತ ಅಕ್ರಮಗಳು ನಡೆಯದಂತೆ ಶಾಲಾ ಆಡಳಿತ ಮಂಡಳಿ ಎಚ್ಚರ ವಹಿಸಬೇಕು. ಮಾತ್ರವಲ್ಲದೇ, ಘಟನೆಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದರು.

ಬಾಲಕನ ಕುಟುಂಬಕ್ಕೆ 15 ಲಕ್ಷ ರೂ. ಘೋಷಣೆ
ಮೃತ ವಿದ್ಯಾರ್ಥಿಯ ಪೋಷಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸೂಚನೆಯ ಮೇರೆಗೆ, ಮೃತನ ಕುಟುಂಬಕ್ಕೆ ಒಟ್ಟು 15 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಘೋಷಿಸಿದ್ದಾರೆ. ಇದರಲ್ಲಿ 10 ಲಕ್ಷ ರೂ. ಸಿಎಂ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ
ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್ ಮೇಲೆ ಆತನ ಸಹಪಾಠಿಗಳು ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆಸಿದ್ದರು.ಗಿರೀಶ್ ಎಂಬ ವಿದ್ಯಾರ್ಥಿ ಸ್ಪೆಷಲ್ ಕ್ಲಾಸ್ ಮುಗಿಸಿಕೊಂಡು ಮನೆಗೆ ಹಿಂದಿರುಗುವ ವೇಳೆ ಆತನ ಮೇಲೆ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳು ಹಲ್ಲೆ ನಡೆಸುತ್ತಿದ್ದರು. ಈ ವೇಳೆ ಗಿರೀಶ್‌ಗೆ ಸಹಾಯ ಮಾಡಲು ಸಂಕೇತ್ ತೆರಳಿದ್ದ, ಆದರೆ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡು ಗಿರೀಶ್‌ ಹಾಗೂ ಸಂಕೇತ್ ಮೇಲೆ ಈ ಮೂವರು ಅನ್ಯಕೋಮಿನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಪರಿಣಾಮ ಸಂಕೇತ್‌ ಸ್ಥಳದಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮೊದಲು ಸಾವನ್ನಪ್ಪಿದ್ದ.ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಏಳು ಮಂದಿ ಅಪ್ರಾಪ್ತ ಬಾಲಕರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 106