ಅಪರಾಧ

ಕರ್ತವ್ಯ ನಿರ್ಲಕ್ಷ್ಯ ಆರೋಪ:ಪುತ್ತೂರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಅಮಾನತಿಗೆ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಹಾಗೂ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ವೇದಶ್ರೀ ನಿತ್ಯಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:
ಫೆಬ್ರವರಿ 16ರಂದು ಕಾಲೇಜು ತರಗತಿಯ ಪಕ್ಕದಲ್ಲಿಯೇ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದಾಗಿ ಉಂಟಾಗುವ ದೂಳಿನಿಂದಾಗಿ ತರಗತಿಯಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಯಿಂದ ಹೊರಬಂದು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದರು. ಈ ವಿದ್ಯಾರ್ಥಿಗಳ ಈ ಪ್ರತಿಭಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.ಅಲ್ಲದೆ ಈ ಪ್ರತಿಭಟನೆಯ ವೇಳೆ ವಿಧ್ಯಾರ್ಥಿನಿಯರ ಪರವಾಗಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿದ್ದ ವೇದಶ್ರೀ ನಿಡ್ಯಾ ನಿಂತಿದ್ದರು. ಪ್ರತಿಭಟನಾ ಸ್ಥಳಕ್ಕೆಆಗಮಿಸಿದ್ದ ಶಾಸಕ ಅಶೋಕ್ ರೈ ಅವರ ಜೊತೆ ಮಾತಿನ ಚಕಮಕಿ ಕೂಡ ನಡೆದಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ವೇದಶ್ರೀ ನಿಡ್ಯಾ ಅವರನ್ನು ವಿಧ್ಯಾರ್ಥಿನಿಯರ ಪ್ರತಿಭಟನೆಗೆ ಸಹಕಾರ ನೀಡಿದ ಆರೋಪ ಹಾಗೂ ಶೈಕ್ಷಣಿಕ ಹಾಗು ಆಡಳಿತಾತ್ಮಕ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸದ ಆರೋಪದಲ್ಲಿ ಅಮಾನತು ಮಾಡಲಾಗಿದೆ.

ಸ್ಥಳೀಯ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು ತಮ್ಮ ಪತ್ರದಲ್ಲಿ ವಿದ್ಯಾರ್ಥಿನಿಯರ ಆರೋಗ್ಯ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡದೇ, ತಪ್ಪು ಮಾಹಿತಿ ನೀಡಿ ಪ್ರತಿಭಟನೆಗೆ ಪ್ರೇರೇಪಿಸಿರುವ ಆರೋಪ ಮಾಡಿದ್ದಾರೆ.

ವಿದ್ಯಾರ್ಥಿನಿಯರ ಸಮಸ್ಯೆಗಳ ಕುರಿತು ಯಾವುದೇ ಲಿಖಿತ ದಾಖಲೆ ಅಥವಾ ಸಭಾ ನಡವಳಿ ವಿವರಗಳು ಲಭ್ಯವಾಗಿಲ್ಲವೆಂಬುದೂ ವರದಿಯಲ್ಲಿ ತಿಳಿಸಲಾಗಿದೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಹಾಗೂ ಇಲಾಖಾ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ ಪ್ರಕಾರ ವಿಚಾರಣೆ ಕಾಯ್ದಿರಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 102