ಅಪರಾಧ

ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸರಿಂದ ತುರ್ತು ತಪಾಸಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದ ಬಿಜೈ ಪ್ರದೇಶದಲ್ಲಿರುವ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಘಟನೆ ಬೆಳಕಿಗೆ ಬಂದಿದೆ.

chennai-shopping
maithri

ಶಾಲೆಯ ಅಧಿಕೃತ ಇಮೇಲ್ ವಿಳಾಸಕ್ಕೆ ಅಪರಿಚಿತರಿಂದ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ತಕ್ಷಣವೇ ಪೊಲೀಸರಿಗೆ ದೂರು ನೀಡಿದೆ. ಮಾಹಿತಿ ಪಡೆದ ಕದ್ರಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಮಗ್ರ ಪರಿಶೀಲನೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಮಂಗಳೂರಿನ ನ್ಯಾಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂಬ ಇಮೇಲ್ ಮೂಲಕ ಬೆದರಿಕೆ ಬಂದಿದ್ದರೂ, ಪರಿಶೀಲನೆ ಬಳಿಕ ಅದು ಹುಸಿ ಕರೆ ಎಂಬುದು ದೃಢಪಟ್ಟಿತ್ತು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ನ್ಯಾಯಾಲಯಗಳಿಗೆ ಇಂತಹ ಬೆದರಿಕೆ ಸಂದೇಶಗಳು ಬಂದಿರುವುದೂ ತನಿಖೆಯಲ್ಲಿ ಪತ್ತೆಯಾಗಿತ್ತು. ಅದೇ ರೀತಿ ಬೆಂಗಳೂರಿನ ಕೆಲವು ಶಾಲೆಗಳಿಗೂ ಇತ್ತೀಚೆಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದವು.

ಇದೀಗ ಮಂಗಳೂರಿನ ಲೂರ್ಡ್ಸ್ ಸೆಂಟ್ರಲ್ ಶಾಲೆಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಯಾರು ಇಮೇಲ್ ಕಳುಹಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ಮುಂದುವರಿದಿದ್ದು, ಈವರೆಗೆ ನಡೆದ ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾ‏ರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಗೃಹಬಂಧನದಲ್ಲಿದ್ದ ಮಹಿಳೆ, ಮಕ್ಕಳ ರಕ್ಷಣೆ – ಪತಿ ವಶಕ್ಕೆ | ಭೂಷಣ್ ಬೋರಸೆ ನೇತೃತ್ವದ ತಂಡದಿಂದ ಕಾರ್ಯಾಚರಣೆ

ಪತಿಯಿಂದಲೇ ಗೃಹಬಂಧನಕ್ಕೊಳಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿದ್ದ ಮಹಿಳೆ ಮತ್ತು…

1 of 106