tamanvi
ಅಪರಾಧ

ಮನೆಯಲ್ಲೇ ಅಕ್ರಮ ಗೋಹತ್ಯೆ, ಮಾಂಸ: ಮನೆ ಜಪ್ತಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಮನೆ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯನ್ನು ಇದೀಗ ಉಪ್ಪಿನಂಗಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಫೆ. 26ರಂದು ರಾತ್ರಿ, ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ ಸುತೇಶ್‌ ಕೆ ಪಿ  ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ ಬಳಿ ತಲುಪಿದಾಗ, ಮನೆಯ ಆವರಣದಿಂದ ಇಬ್ಬರು ವ್ಯಕ್ತಿಗಳು ಓಡಿಹೋಗಿರುತ್ತಾರೆ. ಸದ್ರಿ ಸ್ಥಳವನ್ನು ಪರಿಶೀಲಿಸಿದಾಗ, ಗೋಮಾಂಸವನ್ನು ಪ್ಯಾಕೆಟ್ ಮಾಡಿಡಲಾಗಿದ್ದು, ಸಮೀಪದಲ್ಲಿದ್ದ ಆಟೋ ರಿಕ್ಷಾದಲ್ಲಿಯೂ ಗೋಮಾಂಸದ ಪ್ಯಾಕೆಟ್ ಗಳು ಪತ್ತೆಯಾಗಿದ್ದು ಒಟ್ಟು 56 ಕೆಜಿ ಮಾಂಸ ಪತ್ತೆಯಾಗಿರುತ್ತದೆ. ಮುಂದಿನ ಕಾನೂನುಕ್ರಮಕ್ಕಾಗಿ ಸ್ಥಳದಲ್ಲಿದ್ದ ಗೋಮಾಂಸ, ತೂಕದ ಯಂತ್ರ, ಅಟೋರಿಕ್ಷಾ, ಮೊಬೈಲ್ ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 27/2026, ಕಲಂ: 4, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ:3(5)) BNS 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡು, ಪ್ರಕರಣದ ಆರೋಪಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರು ಜಾನುವಾರುಗಳ ವಧೆಗಾಗಿ ಬಳಸಿದ್ದ ಮನೆಯ ಆವರಣವನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 118