ಅಪರಾಧ

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ವಾಹನ ಸಹಿತ ಇಬ್ಬರು ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ತಾಲೂಕಿನ ಕೊಳ್ಳಾಡು ಗ್ರಾಮದ ಕರೈ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ಫೆಬ್ರವರಿ 26ರ ರಾತ್ರಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾನೂನು ಮತ್ತು ಸುವ್ಯವಸ್ಥೆ) ರಾಮಕೃಷ್ಣ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿತು.

ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕೆಎ–13–ಬಿ–8178 ನೋಂದಣಿಯ ಅಶೋಕ್ ಲೈಲ್ಯಾಂಡ್ ‘ದೋಸ್ತ್’ ವಾಹನವನ್ನು ಪರಿಶೀಲಿಸಿದಾಗ, ಅದರೊಳಗೆ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು.ವಾಹನದಲ್ಲಿದ್ದ ಮಂಡ್ಯ ಜಿಲ್ಲೆಯ ನಿವಾಸಿಗಳಾದ ನವೀನ್ ಮತ್ತು ಚೇತನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ, ಚನ್ನರಾಯಪಟ್ಟಣದ ಶಂಕರ್ ಎಂಬವರು ಬಂಟ್ವಾಳ ತಾಲೂಕಿನ ಸಾಲೆತ್ತೂರಿನ ಶಾಫಿ ಎಂಬವರಿಗೆ ಜಾನುವಾರುಗಳನ್ನು ಕಳುಹಿಸಿರುವುದು ತಿಳಿದುಬಂದಿದೆ.

ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶವಿರುವ ಸಾಧ್ಯತೆ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.ಇನ್ನೂ ಹೆಚ್ಚಿನ ತನಿಖೆಯಲ್ಲಿ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬೇರೆಯವರ ಹೆಸರಿನಲ್ಲಿ ಪಡೆದು ಬಳಸಿರುವ ವಿಚಾರವೂ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 102