ಅಪರಾಧ

ವೇಣೂರಿನಲ್ಲಿ ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ವೇಣೂರು:ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30)ಎಂದು ಗುರುತಿಸಲಾಗಿದೆ.

ಫೆ. 10 ರಂದು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಟ ಗ್ರಾಮದ ಪಣಿಲಾಜೆ ಪ್ರದೇಶದಲ್ಲಿ ಮನೆ ಮನೆಗೆ ಸೇಲ್ಸ್ ಮ್ಯಾನ್ ರೂಪದಲ್ಲಿ ಭೇಟಿ ನೀಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು, ಚಿನ್ನದ ಒಡವೆಗಳನ್ನು ತೊಳೆಯುವ ಹಾಗೂ ಪಾಲೀಶ್ ಮಾಡುವುದಾಗಿ ನಂಬಿಸಿ ಮನೆಮಂದಿಯಿಂದ ಒಡವೆಗಳನ್ನು ಪಡೆದುಕೊಂಡಿದ್ದ. ಬಳಿಕ ಯಾವುದೋ ರಾಸಾಯನಿಕ ದ್ರಾವಣ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ನಡೆಸುತ್ತಿದ್ದ.ಈ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಚಂದನ್ ಕುಮಾರ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಆರೋಪಿಯಿಂದ ಸುಮಾರು ರೂ.75,000 ಮೌಲ್ಯದ 7 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ ಹಾಗೂ ಶ್ರೀಮತಿ ಓಮನ ಎನ್ ಅವರ ನೇತೃತ್ವದಲ್ಲಿ ಎಎಸ್‌ಐ ವೆಂಕಟೇಶ್ ನಾಯ್ಕ, ಎಎಸ್‌ಐ ಬೆನ್ನಿಚ್ಚನ್, ಹೆಚ್‌ಸಿ ಕೃಷ್ಣ,  ಕೇಶವತಿ, ಪಿಸಿ ಬಸವರಾಜ್, ಪಿಸಿ ಮೋಹನ್ ಹಾಗೂ ಪಿಸಿ ರಾಕೇಶ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಅಪರಿಚಿತ ವ್ಯಕ್ತಿಗಳಿಗೆ ಚಿನ್ನಾಭರಣಗಳನ್ನು ನೀಡಬಾರದು ಎಂದು ಮನವಿ ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 103