tamanvi
ಅಪರಾಧ

ಉಳ್ಳಾಲ: ಇನ್‌ಸ್ಟಾಗ್ರಾಂನಲ್ಲಿ ಬಾಂಬ್ ಬೆದರಿಕೆ ಪೋಸ್ಟ್ – ಪ್ರಕರಣ ದಾಖಲು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

maithri

ಮಾರ್ಚ್ 2ರಂದು ಬೆಳಿಗ್ಗೆ ಸುಮಾರು 11.00 ಗಂಟೆಯ ವೇಳೆಗೆ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಕರ್ತವ್ಯದಲ್ಲಿದ್ದರು. ಈ ವೇಳೆ ಇನ್‌ಸ್ಟಾಗ್ರಾಂ ನಲ್ಲಿ ಪರಿಶೀಲನೆ ನಡೆಸುವಾಗ ಸುಹಾಸ್ ಶೆಟ್ಟಿ ಎಂಬಾತನ ಫೋಟೋ ಹೊಂದಿದ್ದ ಪೋಸ್ಟ್‌ಗೆ “ullal masjid hatra bomb blast madtini, support maadi bro” ಎಂಬ ಪ್ರಚೋದನಕಾರಿ ಕಾಮೆಂಟ್ ಮಾಡಿರುವುದು ಗಮನಕ್ಕೆ ಬಂದಿದೆ.

‘shankar11916’ ಎಂಬ ಇನ್‌ಸ್ಟಾಗ್ರಾಂ ಬಳಕೆದಾರನು ಧರ್ಮಗಳ ನಡುವೆ ವೈಮನಸ್ಸು, ದ್ವೇಷ ಹಾಗೂ ವೈರತ್ವ ಉಂಟುಮಾಡುವ ಮತ್ತು ಹಿಂಸೆಗೆ ಪ್ರಚೋದಿಸುವ ಉದ್ದೇಶದಿಂದ ಈ ಕಾಮೆಂಟ್ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಈ ಹಿನ್ನೆಲೆಯಲ್ಲಿ ಸಂಬಂಧಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117