ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್ಡಿಎ ಸಂಪತ್ ಕರ್ನಾಟಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದು, 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದರು. ಈ ಕಾಮಗಾರಿಗಳ ಬಿಲ್ ಪಾವತಿಗಾಗಿ ಶೇ.4ರಂತೆ ಒಟ್ಟು ರೂ.22,600/- ಲಂಚ ನೀಡಬೇಕೆಂದು ಸಂಪತ್ ಅವರು ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ.ಈ ಸಂಬಂಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್ ವಿರುದ್ಧ ಪ್ರಕರಣ ದಾಖಲಾಗಿತ್ತು.






















