ಅಪರಾಧ

ಪುತ್ತೂರು: ಕಾರು ಚಾಲಕರಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನ – ಆರೋಪಿ ಪೊಲೀಸ್ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19)ಪೋಲಿಸರ ವಶದಲ್ಲಿರುವ ವ್ಯಕ್ತಿ. ಪ್ರಕರಣದ ಪಿರ್ಯಾದಿದಾರರಾದ ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು ಮಾರ್ಚ್ 2, 2026 ರಂದು ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕ ಕಡೆಗೆ ತಮ್ಮ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಪುತ್ತೂರು ರಿಲಯನ್ಸ್ ಮಾಲ್ ಸಮೀಪ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಬಂದ ಸುಮಾರು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರ ಕಡೆಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಪಿರ್ಯಾದಿದಾರರು ಹಾಗೂ ಸಾರ್ವಜನಿಕರು ಸೇರಿ ಆರೋಪಿತನನ್ನು ಹಿಡಿಯಲು ಮುಂದಾದಾಗ ಆತನು ಮೋಟಾರು ಸೈಕಲ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಯಲ್ಲಿ ಅ.ಕ್ರ.ನಂ. 26/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 25, 27ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.ತನಿಖೆಯ ವೇಳೆ ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಶಿವಮೊಗ್ಗದಲ್ಲಿ ಹಲ್ಲೆ: ವಿದ್ಯಾರ್ಥಿ ಸಂಕೇತ್ ಮೃತ್ಯು! ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ ಶರಣ್ ಪಂಪ್’ವೆಲ್

ಶಿವಮೊಗ್ಗ: ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ವಿದ್ಯಾರ್ಥಿ ಸಂಕೇತ್…

1 of 103