ಅಪರಾಧ

ಕಂಬಳಬೆಟ್ಟು: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ.

Shani-pooja

ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ.

ಸ್ಪೋಟದ ತೀವ್ರತೆಗೆ 5 ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ. ಆದರೆ ಯಾವುದೇ ಜೀವ ಹಾನಿಯಾಗಿಲ್ಲ. ಘಟನೆ ನಡೆದ ಕೂಡಲೇ ನೀರು ಹಾಕಿ ಬೆಂಕಿ ಆರಿಸುವ ಕಾರ್ಯವನ್ನು ಮಾಡಲಾಯಿತು. ಘಟನೆಯಿಂದಾಗಿ ಆಸುಪಾಸಿನ ಕೆಲವು ಮನೆಗಳಿಗೆ ಹಾನಿಯಾಗಿರುವುದಾಗಿ ಮಾಹಿತಿ ಲಭಿಸಿದೆ.

ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ , ವಿಟ್ಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ , ವಿಟ್ಲ ಠಾಣಾ ಎಸ್.ಐ. ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104