ಅಪರಾಧ

ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ!

ಈ ಸುದ್ದಿಯನ್ನು ಶೇರ್ ಮಾಡಿ

ನಕಲಿ ದಾಖಲೆಗಳ ಜೊತೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಬೈಕ್ ಅನ್ನು ಚಲಾಯಿಸುತ್ತಿದ್ದ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆ ಹಚ್ಚಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Shani-pooja

ಬಂಧಿತ ಆರೋಪಿಯನ್ನು ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ನವಾಜ್ (19) ಎಂದು ಗುರುತಿಸಲಾಗಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಎಂಬಲ್ಲಿ ನವಾಜ್ ಬೈಕ್ ಚಲಾಯಿಸುತ್ತಿದ್ದಾಗ, ಬೆಳ್ತಂಗಡಿ ಸಂಚಾರಿ ಉಪನಿರೀಕ್ಷಕ ಕಿಶೋರ್ ಕುಮಾರ್ ಪಿ. ಮತ್ತು ಸಿಬ್ಬಂದಿ ಶಿವಾನಂದ ಅವರು ವಾಹನವನ್ನು ತಡೆದು ತಪಾಸಣೆ ನಡೆಸಿದ್ದರು. ತಪಾಸಣೆಯ ವೇಳೆ ಬೈಕ್‌ಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.

ಪೊಲೀಸರ ವಿಚಾರಣೆಯ ವೇಳೆ ಸವಾರ ಬೈಕ್‌ನ ಫಿಟ್‌ನೆಸ್ ಸರ್ಟಿಫಿಕೇಟ್ ಅವಧಿ ಮುಗಿದಿದ್ದ ಕಾರಣ, ಆತ ವಾಹನಕ್ಕೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಫೇಸ್‌ಬುಕ್‌ನಲ್ಲಿ ಬಂದಿದ್ದ ಜಾಹೀರಾತನ್ನು ನೋಡಿ, ವಾಹನದ ನೋಂದಣಿ ಮತ್ತು ದಾಖಲೆಗಳನ್ನು ಪಡೆಯಲು ಆನ್‌ಲೈನ್ ಮೂಲಕ ಹಣ ಪಾವತಿಸಿರುವುದಾಗಿ ಆತ ತಿಳಿಸಿದ್ದಾನೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಜಾಲದ ಹಿಂದೆ ಇರುವ ಇತರ ವ್ಯಕ್ತಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 104