ಅಪರಾಧ

ದರ್ಬೆ: ವಿದ್ಯಾರ್ಥಿಗಳಿಗೆ ಬೀಡಿ ಮಾರಾಟ ಯತ್ನ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಧ್ಯಾಹ್ನದ ಹೊತ್ತು ವಿದ್ಯಾರ್ಥಿಗಳಿಗೆ ಬೀಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಘಟನೆ ದರ್ಬೆಯಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ.

Shani-pooja

ಮಧ್ಯಪ್ರದೇಶ ಮೂಲಕ ನಾಲ್ವರ ತಂಡ ವಿದ್ಯಾರ್ಥಿಗಳಿಗೆ ಬೀಡಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು, ಬೀಡಿಯ ಮೂಲಕ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಂಕಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ್ದರು. ವಿಚಾರಿಸಿದಾಗ, ಬೀಡಿಯನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಮಧ್ಯಪ್ರದೇಶ ಮೂಲಕ ನಾಲ್ವರ ತಂಡ ಈ ಕೃತ್ಯ ನಡೆಸುತ್ತಿದ್ದುದು ಬೆಳಕಿಗೆ ಬಂದಿದೆ.

ದರ್ಬೆ ಬಳಿಯಿರುವ ಖಾಲಿ ಜಾಗದಲ್ಲಿ ವಾಹನ ನಿಲ್ಲಿಸಿ, ಬಲೂನ್ ಸೇರಿದಂತೆ ಇನ್ನಿತರ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ತಂಡದ ಕೃತ್ಯ ಇದು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105